Priyank Kharge ಕ್ಷೇತ್ರದ ಠಾಣೆಯಲ್ಲೇ ಪೊಲೀಸರ ಇಸ್ಪೀಟ್ ಆಟ! ಐವರು ಪೊಲೀಸ್ ಸಿಬ್ಬಂದಿ ಅಮಾನತು!

ಕಲಬುರಗಿ: ಇಸ್ಪೀಟು, ಜೂಜಾಟ ಬಹುತೇಕ ಜನರಿಗೆ ಗೊತ್ತಿದೆ. ಇದನ್ನು ತಡೆಯಲು ಸಾಕಷ್ಟು ರೀತಿ ಪ್ರಯತ್ನ ಪಡುತ್ತಿದ್ದಾರೆ. ಆದ್ರೆ ಕಾನೂನು ಕಾಪಾಡ ಬೇಕಾದ ಪೊಲೀಸರೇ ಕಾನೂನು ಉಲ್ಲಂಘಿಸಿದರೇ ಹೇಗೆ ಹೇಳಿ.? ಹೌದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ ಖರ್ಗೆ ಕ್ಷೇತ್ರದಲ್ಲಿ ಪೊಲೀಸ್ ಠಾಣೆಯಲ್ಲಿ ನಿಶ್ಚಿಂತೆಯಿಂದ ರಾಜಾರೋಷವಾಗಿ ಇಸ್ಪೀಟ್ ಆಡಿದ್ದಾರೆ.
ವಾಡಿ ಪೊಲೀಸ್ ಠಾಣೆಯ ಮೊದಲನೇ ಅಂತಸ್ತಿನಲ್ಲಿ ಪೊಲೀಸರು ಖಾಕಿ ಬಟ್ಟೆಯಲ್ಲೇ ರಮ್ಮೀ ಇಸ್ಪೀಟ್ ಆಟ ಆಡ್ತಿದ್ದಾರೆ. ವಾಡಿ ಪೊಲೀಸ್ ಠಾಣೆಯ ಮೊದಲನೇ ಅಂತಸ್ತಿನಲ್ಲಿ, ಖಾಕಿ ಬಟ್ಟೆಯಲ್ಲೇ ನಾಲ್ಕೈದು ಜನ ಪೊಲೀಸರು ಸೇರಿಕೊಂಡು ಇಸ್ಪೀಟ್ ಆಟ ಆಡುತ್ತಿದ್ದ ವಿಡಿಯೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಪೊಲೀಸ್ ಇಲಾಖೆ ತಲೆ ತಗ್ಗಿಸುವ ಸಂಗತಿಯಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಐವರು ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಇನ್ನು, ಪೊಲೀಸರು ಆಗಾಗ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಕಾರಣ ಕೇಳಿ ವಾಡಿ ಠಾಣೆ ಪಿಎಸ್ಐ ತಿರುಮಲೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






