Pulwama Attack: 2019ರ ಪುಲ್ವಾಮ್ ದಾಳಿ ಹೊಣೆ ಹೊತ್ತ ಪಾಕ್..! ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ತನ್ನ ಶತ್ರು ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಪಾಕಿಸ್ತಾನವನ್ನು ಎಲ್ಲಾ ಕಡೆಗಳಿಂದಲೂ ಸೇಡು ತೀರಿಸಿಕೊಳ್ಳಲು ಮತ್ತು ಗಮನಾರ್ಹ ಬದಲಾವಣೆಯನ್ನು ಸೂಚಿಸುವ ಹಲವಾರು ದೃಢವಾದ ಕ್ರಮಗಳನ್ನು ಜಾರಿಗೆ ತಂದಿತು. ಇದರ ಜೊತೆಗೆ ಆಪರೇಷನ್ ಸಿಂಧೂರ್ ಹೆಸರಲ್ಲಿ ಭಾರತ ಏಕಾಏಕಿ ಪಾಕಿಸ್ತಾನದ ಮೇಲೆ ಅಟ್ಯಾಕ್ ಮಾಡಿತ್ತು. ಇದಕ್ಕೆ ಪಾಕಿಸ್ತಾನ ಕೂಡ ಪ್ರತಿಕ್ರಿಯೆಯಾಗಿ ದಾಳಿಗಳು ನಡೆಸಿ ಪರಿಸ್ಥಿತಿ ಉದ್ವಿಗ್ನ ಹಂತಕ್ಕೆ ತಲುಪಿದಾಗ ನಿನ್ನೆ ಕದನ ವಿರಾಮ ಘೋಷಣೆ ಮಾಡಲಾಯಿತು.
ಇದೀಗ ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ನಡೆಸಿದ ಸುದ್ದಿಗೋಷ್ಠಿಯಲ್ಲಿ ಏರ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಮಾತನಾಡಿ, ಪುಲ್ವಾಮಾ ಭಯೋತ್ಪಾದಕ ದಾಳಿಯು ಪಾಕಿಸ್ತಾನಿ ಮಿಲಿಟರಿಯ ʻಯುದ್ಧತಂತ್ರದ ಭಾಗʼ ಎಂದು ಹೇಳಿದ್ದಾರೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರವನ್ನು ಬಹಿರಂಗವಾಗಿ ಪಾಕ್ ಒಪ್ಪಿಕೊಂಡಿದೆ.
ಮುಂದುವರಿದು…. ಪಾಕಿಸ್ತಾನದ ವಾಯುಪ್ರದೇಶ, ಭೂಮಿ, ಜಲಪ್ರದೇಶಗಳು ಅಥವಾ ಇಲ್ಲಿನ ಜನರಿಗೆ ಬೆದರಿಕೆಯೊಡ್ಡಿದರೆ, ಯಾವುದೇ ರಾಜಿ ಸಾಧ್ಯವಿಲ್ಲ. ಅದನ್ನು ಗಮನಿಸದೆ ಬಿಡಲೂ ಸಾಧ್ಯವಿಲ್ಲ. ನಾವು ನಮ್ಮ ರಾಷ್ಟ್ರಕ್ಕೆ ಋಣಿಯಾಗಿದ್ದೇವೆ. ಪಾಕಿಸ್ತಾನಿ ಜನರು ತಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಹೆಮ್ಮೆ ಮತ್ತು ನಂಬಿಕೆಯನ್ನ ನಾವು ಯಾವಾಗಲೂ ಎತ್ತಿಹಿಡಿಯುತ್ತೇವೆ.
ಪುಲ್ವಾಮಾದಲ್ಲಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಅದನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಈಗಲೂ ನಮ್ಮ ಕಾರ್ಯಾಚರಣೆ ಮತ್ತು ಕಾರ್ಯತಂತ್ರವನ್ನು ಪ್ರದರ್ಶಿಸಿದ್ದೇವೆ. ಇದನ್ನ ಅವರು ಕೂಡ ಗಮನಿಸಿರುತ್ತಾರೆ ಅಂತ ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಏನಿದು ಪುಲ್ವಾಮಾ ಘಟನೆ?
2019ರ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಸ್ಫೋಟಕ ತುಂಬಿದ್ದ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






