Puneeth Rajkumar: ಅಪ್ಪು ಸಮಾಧಿಕಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜಕುಮಾರ್!
ಬೆಂಗಳೂರು: ಕರುನಾಡ ಜನಮನದೊಳಗೆ ಶಾಶ್ವತವಾಗಿ ನೆಲೆಸಿರುವ ಅಪ್ಪು ಮರೆಯಾಗಿದ್ದಾರೆ. ದೊಡ್ಮನೆ ಪ್ರೀತಿಯ ಕುಡಿಯನ್ನು ಕಳೆದುಕೊಂಡ ಕರುನಾಡಿನ ರೋಧನೆ ಇನ್ನೂ ನಿಂತಿಲ್ಲ. ಇಂದು ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಪುನೀತ್ ನಿಧನ ಹೊಂದುತ್ತಾರೆ ಎಂದರೆ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರು ಸಾಯುವಾಗ ಅವರಿಗೆ 46 ವರ್ಷ ವಯಸ್ಸು.
ಇನ್ನೂ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘಣ್ಣ ದಂಪತಿ, ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಆಗಮಿಸಿ, ಪೂಜೆಗೆ ಸಿದ್ಧತೆ ಮಾಡಿಕೊಂಡು ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿದ್ದು, ಅಪ್ಪು ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪೂಜೆ ವೇಳೆ ಅಭಿಮಾನಿಗಳು ಅಪ್ಪು ಅಪ್ಪು ಅಂತಾ ಜೈಕಾರ ಹಾಕುತ್ತಿದ್ದು, ಕೈಯಲ್ಲಿ ರೋಸ್ ಹಿಡಿದು ಆಗಮಿಸುತ್ತಿದ್ದಾರೆ. ಇನ್ನೂ ಯುವ ರಾಜ್‌ಕುಮಾರ್‌ನ್ನು ನೋಡಿ ಜೂ.ಪವರ್ ಸ್ಟಾರ್‌ಗೆ ಎಂದು ಜೈ ಎಂದು ಜೈಕಾರ ಹಾಕುತ್ತಿದ್ದಾರೆ. ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಕುಟುಂಬಸ್ಥರು ಪಾರ್ವತಮ್ಮ ಹಾಗೂ ಡಾ. ರಾಜ್‌ಕುಮಾರ್ ಸಮಾಧಿಗೆ ಪೂಜೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?