PV Sindhu: ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ ಸಿಂಧು..! ವರ ಯಾರು? ಎಲ್ಲಿ ಮದುವೆ ಗೊತ್ತಾ..?

ಡಿಸೆಂಬರ್ 3, 2024 - 12:09
 0  8
PV Sindhu: ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ ಸಿಂಧು..! ವರ ಯಾರು? ಎಲ್ಲಿ ಮದುವೆ ಗೊತ್ತಾ..?

ನವದೆಹಲಿ: ಒಲಂಪಿಕ್ಸ್​ನಲ್ಲಿ ಎರಡು ಪದಕ ಗೆದ್ದಿರುವ ಸಿಂಧು ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿದ್ದಾರೆ. ಭಾರತದ ಸ್ಟಾರ್​ ಬ್ಯಾಡ್ಮಿಂಟನ್‌ ತಾರೆ ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಹೈದರಾಬಾದ್ ಮೂಲದ ವೆಂಕಟ ಸಾಯಿ ದತ್ತ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಡಿಸೆಂಬರ್ 22ರಂದು ಉದಯಪುರದಲ್ಲಿ ವಿವಾಹ ನೆರವೇರಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಹೌದು ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ. ಈ ಕುರಿತು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದು,

ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಿಂಧು ಇಲ್ಲಿಯವರೆಗೆ ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಿವಿ ಸಿಂಧು ಅವರು ಭಾರತ ಕಂಡ ಅತ್ಯುತ್ತಮ ಶಟ್ಲರ್ ಆಗಿದ್ದಾರೆ. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಅವರು 2019ರಲ್ಲಿ ಚಿನ್ನವೂ ಸೇರಿದಂತೆ ಒಟ್ಟು 5 ಬಾರಿ ಪದಕ ಗೆದ್ದಿದ್ದಾರೆ. ಇನ್ನು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಂದು ಬಾರಿ ಬೆಳ್ಳಿ ಪದಕ ಮತ್ತು ಮತ್ತೊಂದು ಬಾರಿ ಕಂಚಿನ ಪದಕ ಗೆದ್ದು ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow