Rain Alert: ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಕೊಡಗು ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲೂ ಭಾರೀ ಮಳೆಯಾಗಲಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ಧಾರವಾಡ, ವಿಜಯಪುರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 22 ರಂದು ಸುರಿದ ಭಾರೀ ಮಳೆಗೆ ಬೆಂಗಳೂರು ಕೂಲ್ ಕೂಲ್ ಆಗಿದೆ.
ಇಂದು ಕೂಡ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಹಾಗೂ ಮಲೆನಾಡಿನಾದ್ಯಂತ ಮಳೆಯ ಅಬ್ಬರ ಹೆಚ್ಚಲಿದ್ದು, ಕಳೆದ ವರ್ಷಕ್ಕಿಂತ ದುಪ್ಪಟ್ಟು ಮಳೆಯಾಗಲಿದೆ. ರಾಜ್ಯದ 3 ಜಿಲ್ಲೆಗಳಾದ ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






