Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇಂದು 3 ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.!
ಬೆಂಗಳೂರು: ರಾಜ್ಯದಲ್ಲಿ ಮಳೆ ಭಾರೀ ಪ್ರಮಾಣದಲ್ಲಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರೆಡ್ ಅಲರ್ಟ್
- ಬೆಳಗಾವಿ
- ಉತ್ತರ ಕನ್ನಡ
- ಉಡುಪಿ
ರೆಡ್ ಅಲರ್ಟ್ ಘೋಷಣೆಯಾದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 204.5 ಮಿಮೀ ಮೀರಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಭೀತಿ ಇರುವುದರಿಂದ ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.
ಆರೆಂಜ್ ಅಲರ್ಟ್
- ದಕ್ಷಿಣ ಕನ್ನಡ
- ಚಿಕ್ಕಮಗಳೂರು
- ಧಾರವಾಡ
- ಗದಗ
- ಹಾವೇರಿ
- ಶಿವಮೊಗ್ಗ
ಯೆಲ್ಲೋ ಅಲರ್ಟ್
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ಮೈಸೂರು
- ಮಂಡ್ಯ
- ರಾಮನಗರ
- ತುಮಕೂರು
- ಹಾಗೂ ಇತರೆ ಉಳಿದ ಎಲ್ಲಾ ಜಿಲ್ಲೆಗಳು
ಅಲ್ಲದೆ, ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?