Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಮುನ್ಸೂಚನೆ..! ರೆಡ್ ಅಲರ್ಟ್ ಘೋಷಣೆ

ಜೂನ್ 11, 2025 - 16:00
 0  12
Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಮುನ್ಸೂಚನೆ..! ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ರೆಲ್ಲೋ ಅಲರ್ಟ್ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮ್ನಾಬಾದ್, ಚಿತ್ತಾಪುರ್, ಚಿಟಗುಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟವಾಳ, ಕುಂದಾಪುರ, ಜಿಕೆವಿಕೆಯಲ್ಲಿ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

ಬೆಂಗಳೂರು ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow