Rainfall In Bangalore: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಆರ್ಭಟ..! ದಕ್ಷಿಣ ಒಳನಾಡಿನ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜನವರಿ 19, 2025 - 10:42
 0  12
Rainfall In Bangalore: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಆರ್ಭಟ..! ದಕ್ಷಿಣ ಒಳನಾಡಿನ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಇಂದು ಮಳೆಯಾಗಿದೆ. ಅದಲ್ಲದೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ದಲ್ಲಿ ಕೂಡ ಮಳೆಯಾಗಲಿದೆ.

 ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ. ಬೀದರ್ನಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್ಮಂಡ್ ವೃತ್ತ, ಟೌನ್ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ. ಎಚ್ಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.  

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow