Ranji Trophy: ರಣಜಿ ಟ್ರೋಫಿಯಲ್ಲಿ ಆಡಲು ಗ್ರೀನ್ ಸಿಗ್ನಲ್ ಕೊಟ್ಟ ರೋಹಿತ್ ಶರ್ಮಾ

ಜನವರಿ 20, 2025 - 09:20
 0  9
Ranji Trophy: ರಣಜಿ ಟ್ರೋಫಿಯಲ್ಲಿ ಆಡಲು ಗ್ರೀನ್ ಸಿಗ್ನಲ್ ಕೊಟ್ಟ ರೋಹಿತ್ ಶರ್ಮಾ

ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಆಟಗಾರರು ದೇಶೀಯ ಟೂರ್ನಿ ಆಡಬೇಕೆಂಬ ಬಿಸಿಸಿಐನ ಕಟ್ಟಪ್ಪಣೆಯಾಗಿದೆ. ಇದರ ನಡುವೆ ಟೆಸ್ಟ್ ಸರಣಿಗಳ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಬಿಸಿಸಿಐ ಇದೀಗ ಟೀಮ್ ಇಂಡಿಯಾ ಆಟಗಾರರಿಗೆ ರಣಜಿ ಟೂರ್ನಿ ಆಡುವಂತೆ ಸೂಚಿಸಿದೆ.

ಅದರಂತೆ ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೆಲ ಆಟಗಾರರು ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ 2ನೇ ಸುತ್ತಿನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.  ಹೌದು ರೋಹಿತ್ ಶರ್ಮಾ ಕೊನೆಯ ಬಾರಿ ರಣಜಿ ಟೂರ್ನಿ ಪಂದ್ಯವಾಡಿದ್ದು 2015 ರಲ್ಲಿ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಉತ್ತರ ಪ್ರದೇಶ ವಿರುದ್ಧ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 113 ರನ್ ಬಾರಿಸಿ ಮಿಂಚಿದ್ದರು.

ಇದೀಗ 10 ವರ್ಷಗಳ ಬಳಿಕ ಮತ್ತೆ ತವರು ಮೈದಾನದಲ್ಲೇ ರಣಜಿ ಪಂದ್ಯವಾಡಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ 7 ವರ್ಷಗಳ ಬಳಿಕ ರಣಜಿ ಪಂದ್ಯವಾಡಲು ರಿಷಭ್ ಪಂತ್ ಕೂಡ ಸಜ್ಜಾಗಿದ್ದಾರೆ. 2017 ರಲ್ಲಿ ಕೊನೆಯ ಬಾರಿ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದ ಪಂತ್ ಇದೀಗ ಮತ್ತೆ ದೆಹಲಿ ಪರ ವೈಟ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಾಗ್ಯೂ ಈ ರಣಜಿ ಟೂರ್ನಿಯ ದ್ವಿತೀಯಾರ್ಧದ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ.   

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow