Ranya Rao: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಕನ್ನಡ ಖ್ಯಾತ ನಟಿ ರನ್ಯಾ ರಾವ್..!

ಬೆಂಗಳೂರು: ಸುದೀಪ್ ನಾಯಕನಾಗಿ ನಟಿಸಿದ ಸೂಪರ್ ಹಿಟ್ ಸಿನಿಮಾ ಮಾಣಿಕ್ಯ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ರನ್ನು ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟಿ ರನ್ಯಾ ರಾವ್ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ. ರನ್ಯಾ, ಕನ್ನಡದ ‘ಮಾಣಿಕ್ಯ’ ಚಿತ್ರದ ನಾಯಕಿಯಾಗಿ ನಟಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






