Rashmika Mandanna: ಇನ್ಮುಂದೆ ಸಿನಿಮಾ ಮಾಡಲ್ವಾ ರಶ್ಮಿಕಾ ಮಂದಣ್ಣ? ವೇದಿಕೆಯಲ್ಲೇ ನಿವೃತ್ತಿ ಬಗ್ಗೆ ಮಾತನಾಡಿದ ನ್ಯಾಷನಲ್ ಕ್ರಶ್!

ಜನವರಿ 24, 2025 - 16:03
 0  13
Rashmika Mandanna: ಇನ್ಮುಂದೆ ಸಿನಿಮಾ ಮಾಡಲ್ವಾ ರಶ್ಮಿಕಾ ಮಂದಣ್ಣ? ವೇದಿಕೆಯಲ್ಲೇ ನಿವೃತ್ತಿ ಬಗ್ಗೆ ಮಾತನಾಡಿದ ನ್ಯಾಷನಲ್ ಕ್ರಶ್!

ರಶ್ಮಿಕಾ ಮಂದಣ್ಣ ಈಗಾಗಲೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ಹಿಟ್ ಸಿನಿಮಾಗಳೊಂದಿಗೆ ರಶ್ಮಿಕಾ ಮಂದಣ್ಣ ಬಾಲಿವುಡ್​ಗೆ​ ಹಾರಿದ್ರು. ಇದೀಗ ಟಾಲಿವುಡ್, ಬಾಲಿವುಡ್​ನಲ್ಲಿ ಸಖತ್ ಬ್ಯುಸಿ ನಟಿಯಾಗಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಅವರು ತಮ್ಮ ಚಾವಾ ಸಿನಿಮಾದ ನಂತರ ನಿವೃತ್ತಿ ಹೊಂದುವ ಬಗ್ಗೆ ಘೋಷಣೆ ಮಾಡಿದ್ದಾರೆ. 

ಹೌದು ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ‘ಗುಡ್​ಬೈ’ ಹಾಗೂ ‘ಮಿಷನ್ ಮಜ್ನು’ ಸಿನಿಮಾಗಳನ್ನು ಮಾಡಿದ್ದಾರೆ. ಇದು ಅವರ ಬಾಲಿವುಡ್ ಜರ್ನಿಗೆ ಸಾಕಷ್ಟು ಮೈಲೇಜ್ ನೀಡಿದೆ. ಹಿಂದಿ ನಿರ್ಮಾಪಕರು ರಶ್ಮಿಕಾ ಅವರ ಕಾಲ್​ಶೀಟ್ ಪಡೆಯಲು ರೇಸ್​ನಲ್ಲಿ ಇದ್ದಾರೆ. ಅವರು ವಿಕ್ಕಿ ಕೌಶಲ್ ಜೊತೆ ‘ಛಾವಾ’ ಸಿನಿಮಾ ಮಾಡಿದ್ದಾರೆ.

ಈ ಚಿತ್ರದಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಪುತ್ರ ಸಾಂಭಾಜಿ ಮಹರಾಜನ ಪಾತ್ರದಲ್ಲಿ ವಿಕ್ಕಿ ನಟಿಸಿದ್ದಾರೆ. ನಟಿ ರಶ್ಮಿಕಾ ಅವರು ಸಾಂಭಾಜಿ ಪತ್ನಿ ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಈ ಪಾತ್ರ ಮಾಡಿ ತೃಪ್ತಿ ಆಗಿದೆ.

‘ಅದೊಂದು ಗೌರವ. ದಕ್ಷಿಣದಿಂದ ಬಂದು ಮಹಾರಾಣಿ ಯೇಸುಬಾಯಿ ಪಾತ್ರವನ್ನು ಮಾಡಿದ್ದೇನೆ. ಇದು ನನ್ನ ಜೀವಿತಾವಧಿಯಲ್ಲಿ ಮಾಡಿದ ವಿಶೇಷ ಕೆಲಸ. ಈ ಸಿನಿಮಾ ಬಳಿಕ ನಿವೃತ್ತಿ ಹೊಂದಲು ನನಗೆ ಖುಷಿ ಇದೆ ಎಂದು ನಿರ್ದೇಶಕ ಲಕ್ಷ್ಮಣ್ ಅವರಿಗೆ ಹೇಳಿದ್ದೇನೆ’ ಎಂದಿದ್ದಾರೆ ರಶ್ಮಿಕಾ.

‘ನಾನು ಅಳುತ್ತಾ ಕೂರುವ ವ್ಯಕ್ತಿ ಅಲ್ಲ. ಆದರೆ, ಈ ಟ್ರೇಲರ್​ನ ನನ್ನನ್ನು ಪ್ರಚೋದಿಸಿತು. ವಿಕ್ಕಿ ಕೌಶಲ್ ದೇವರ ರೀತಿ ಕಾಣುತ್ತಿದ್ದಾರೆ. ಅವರು ಛಾವಾ’ ಎಂದು ರಶ್ಮಿಕಾ ಮಂದಣ್ಣ ಅವರು ಟ್ರೇಲರ್ ಲಾಂಚ್ ಈವೆಂಟ್​ನಲ್ಲಿ ಹೇಳಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. 

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow