Ration Card: ನಿಮ್ಮ ಮನೆಯಲ್ಲಿ ಕಾರು, ಟ್ರ್ಯಾಕ್ಟರ್ ಇದೆಯಾ? ಹಾಗಾದ್ರೆ BPL ಕಾರ್ಡ್ದಾರರಿಗೆ ಬಿಗ್ ಶಾಕ್!

ಅಕ್ಟೋಬರ್ 21, 2024 - 19:57
 0  39
Ration Card: ನಿಮ್ಮ ಮನೆಯಲ್ಲಿ ಕಾರು, ಟ್ರ್ಯಾಕ್ಟರ್ ಇದೆಯಾ? ಹಾಗಾದ್ರೆ BPL ಕಾರ್ಡ್ದಾರರಿಗೆ ಬಿಗ್ ಶಾಕ್!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಫಲಾನುಭವಿಗಳು ಕೂಡ ಅದರ ಉಪಯೋಗವನ್ನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಮಧ್ಯೆ ಬಿಪಿಎಲ್ ಫಲಾನುಭವಿಗಳಿಗೆ ಹೊಸ ಸಮಸ್ಯೆ ಎದುರಾಗಿದೆ. ಹೌದು ಸರ್ಕಾರಿ ವೇತನ, ಕಾರು, ಟ್ಯಾಕ್ಟರ್​ ಇದ್ದೂ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಸರ್ಕಾರದ ಮಾನದಂಡ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಹೊಂದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ.

ಪಡಿತರ ಚೀಟಿ ಹೊಂದಲು ಯಾರು ಅನರ್ಹರು ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರು.

ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.

ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್​​, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ. ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow