RCB Victory Parade: RCB ಆಟಗಾರರ ವಿಜಯೋತ್ಸವ ಮೆರವಣಿಗೆ ಇಲ್ಲ: ಗೃಹ ಸಚಿವರು ಹೇಳಿದ್ದೇನು..?

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಪ್ ಗೆದ್ದ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡದ ಗೆಲುವಿಗೆ ಕರ್ನಾಟಕ ಸರ್ಕಾರ ಅಭಿನಂದನೆ ಸಲ್ಲಿಸಲಿದೆ.
ಆದರೆ, ಭದ್ರತಾ ಕಾರಣಗಳಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಯುವುದಿಲ್ಲ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಆರ್‌ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲ ಆಟಗಾರರು ಬಸ್‌ನಲ್ಲಿ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದಿಂದ ವಿಜಯಯಾತ್ರೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಹೇಳಿದ್ದಾರೆ.
ಆರ್‌ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್‌ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






