RCB vs GT: ಟಾಸ್ ಗೆದ್ದ ಗುಜರಾತ್: ಹ್ಯಾಟ್ರಿಕ್ ಗೆಲುವಿನತ್ತ ಬೆಂಗಳೂರು ಕಣ್ಣು!

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಲ್ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೀಸನ್ ಅನ್ನು ಸತತ 2 ಗೆಲುವುಗಳೊಂದಿಗೆ ಆರಂಭಿಸಿದ್ದು, ಈಗ ಈ ಸೀಸನ್ನಲ್ಲಿ ಮೊದಲ ಬಾರಿಗೆ ತಮ್ಮ ತವರು ನೆಲದಲ್ಲಿ ಆಡುತ್ತಿದೆ. ಇತ್ತ ಗುಜರಾತ್ ಈ ಸೀಸನ್ನಲ್ಲಿ ತವರಿನಿಂದ ಹೊರಗೆ ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಟಾಸ್ ಗೆದ್ದ ಗುಜರಾತ್ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI):
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಲ್.
ಗುಜರಾತ್ ಟೈಟನ್ಸ್ ಪ್ಲೇಯಿಂಗ್-11
ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.
ನಿಮ್ಮ ಪ್ರತಿಕ್ರಿಯೆ ಏನು?






