RCB ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: Royal Challengers ತಂಡ ಮಾರಾಟ ಆಗುತ್ತಾ?
ಡಿಯಾಜಿಯೋ ಕಂಪೆನಿಯ ಒಡೆತನದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು.
ಆದರೆ ಇದೀಗ ಆರ್ಸಿಬಿ ಮಾಲೀಕರು ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ. ಆರ್ಸಿಬಿ ತಂಡಕ್ಕೆ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ತಂಡ ಚಾಂಪಿಯನ್ ಪಟ್ಟವನ್ನು ಸಹ ಅಲಂಕರಿಸಿದೆ. ಹೀಗಾಗಿ ಉತ್ತಮ ನಿರ್ವಹಣಾ ತಂಡವನ್ನು ಫ್ರಾಂಚೈಸಿ ಹೊಂದಿದೆ. ಇದೇ ಕಾರಣದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಪೂರ್ಣ ಶೇರು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಆಸಕ್ತಿ ತೋರಿದೆ.
ಅಲ್ಲದೆ ಐಪಿಎಲ್ 2026 ಕ್ಕೂ ಮುನ್ನ ಒಟ್ಟಾರೆಯಾಗಿ ಲಭ್ಯವಿರುವ ಏಕೈಕ ತಂಡವಾಗಿ ಆರ್ಸಿಬಿ ಮಾರಾಟವಾಗಬಹುದು. ಬಿಗ್ ಗ್ಲೋಬಲ್ ಫಂಡ್‌ಗಳಲ್ಲಿ ಒಂದು ಅಥವಾ ಬೃಹತ್ ಹೂಡಿಕೆದಾರರು ಆರ್ಸಿಬಿ ತಂಡವನ್ನು ಖರೀದಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತದಲ್ಲಿ ಹೂಡಿಕೆ ಮಾಡಲು ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿಲ್ಲ. ಅದನ್ನು ಬಳಸಿಕೊಳ್ಳುವ ಯಾರಿಗಾದರೂ ಶುಭವಾಗಲಿ ಎಂದು ಲಲಿತ್ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?