Renukaswami Murder Case; ದರ್ಶನ್ ಶರ್ಟ್ ಮೇಲೆ ರೇಣುಕಾ ರಕ್ತದ ಕಲೆ.!

ಆಗಸ್ಟ್ 8, 2024 - 13:26
 0  9
Renukaswami Murder Case; ದರ್ಶನ್ ಶರ್ಟ್ ಮೇಲೆ ರೇಣುಕಾ ರಕ್ತದ ಕಲೆ.!
Focus Karnataka Darshan in jail

ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ದರ್ಶನ್ (Darshan) ವಿರುದ್ಧ ಅತಿ ದೊಡ್ಡ ಸಾಕ್ಷ್ಯ ಬಯಲಾಗಿದೆ. ದರ್ಶನ್, ರೇಣುಕಾಸ್ವಾಮಿ ಹತ್ಯೆಯಾದ ಸಮಯದಲ್ಲಿ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾಸ್ವಾಮಿಯ ರಕ್ತದ ಕಲೆಗಳಿರುವುದು ಸಾಬೀತಾಗಿದೆ.

ಈ ಸಾಕ್ಷ್ಯ ದರ್ಶನ್ ವಿರುದ್ಧದ ಅರೋಪವನ್ನು ಸಾಬೀತುಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ. ಇನ್ನು ದರ್ಶನ್ ಗ್ಯಾಂಗ್‌ನಿಂದ 66ಕ್ಕೂ ಹೆಚ್ಚು ವಸ್ತುಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿತ್ತು. 

ಇದೀಗ ಒಂದೊಂದೆ ವರದಿಗಳು ತನಿಖಾಧಿಕಾರಿಗಳ ಕೈಸೇರುತ್ತಿವೆ. ಈ ಬೆಳವಣಿಗೆ ‘ಡಿ’ ಗ್ಯಾಂಗ್‌ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಜೊತೆಗೆ ಪ್ರಕರಣದ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow