Road Accident: ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಮೇ 8, 2025 - 14:00
 0  17
Road Accident: ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಹಾವೇರಿ: ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರು.

ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್​ ಎಂಬುವವರ ಸಂಬಂಧಿಕರ ಮಕ್ಕಳು ಎಂದು ಹೇಳಲಾಗುತ್ತಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow