Road Accident: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವು..!

ಮೇ 21, 2025 - 10:11
 0  8
Road Accident: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವು..!

ವಿಜಯಪುರ: ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್ 50ರಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಮಹೀಂದ್ರ ಎಕ್ಸ್​ಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ.

ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್​ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬಸ್ ಚಾಲಕ ಬಸವರಾಜ ರಾಠೋಡ್ ಗಂಭೀರ ಗಾಯಗೊಂಡಿದ್ದರು. ಅವರು ನಂತರ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow