RR Vs SRH IPL 2025: ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ ರಾಜಸ್ಥಾನ್! ನೂತನ ಕ್ಯಾಪ್ಟನ್ ಯಾರು ಗೊತ್ತಾ?

ಮಾರ್ಚ್ 23, 2025 - 09:15
 0  18
RR Vs SRH IPL 2025:  ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ ರಾಜಸ್ಥಾನ್! ನೂತನ ಕ್ಯಾಪ್ಟನ್ ಯಾರು ಗೊತ್ತಾ?

ಐಪಿಎಲ್ 2025ರ ಸೀಸನ್ ಶನಿವಾರದಿಂದ ಪ್ರಾರಂಭವಾಗಿದ್ದು, ನಿನ್ನೆ ಬೆಂಗಳೂರು ಹಾಗೂ ಕೋಲ್ಕತಾ ತಂಡದ ನಡುವೆ ಮೊದಲ ಪಂದ್ಯ ನಡೆದಿದೆ. 

ಅದರಂತೆ ಇಂದು ರಾಜಸ್ಥಾನ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ಫೈಟ್ ನಡೆಯಲಿದೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾಗಿ ಸಂಜು ಸ್ಯಾಮ್ಸನ್ ಇರುವುದಿಲ್ಲ ಎನ್ನಲಾಗಿದೆ. 

ತಂಡದ ಯುವ ಆಟಗಾರ ರಿಯಾನ್ ಪರಾಗ್‌ಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಬೆರಳಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಸ್ಯಾಮ್ಸನ್ ಕೆಲವು ದಿನಗಳ ಹಿಂದೆ ತಂಡವನ್ನು ಸೇರಿಕೊಂಡಿದ್ದು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಭಾರತದ ಟಿ20ಐ ಸರಣಿಯ ಸಮಯದಲ್ಲಿ ಅವರು ಗಾಯಗೊಂಡಿದ್ದರು, ಇದರಿಂದಾಗಿ ಅವರು ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದರು.

ಸದ್ಯ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್ ಮಾಡಲು ಎನ್ ಸಿಎ ಅನುಮತಿ ನೀಡಿಲ್ಲ. ಹೀಗಾಗಿ ಮೊದಲ ಮೂರು ಪಂದ್ಯಗಳಿಗೆ ಅವರು ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಅವಕಾಶ ಇರುವ ಕಾರಣ ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow