Rukmini Vasanth: ಪ್ರಶಾಂತ್ ನೀಲ್- ಜ್ಯೂ. ಎನ್‌ಟಿಆರ್ ಚಿತ್ರಕ್ಕೆ “ರುಕ್ಮಿಣಿ ವಸಂತ್” ನಾಯಕಿಯಾಗಿ ಆಯ್ಕೆ!

ನಿರ್ದೇಶಕ ಪ್ರಶಾಂತ್ ನೀಲ್, ಕನ್ನಡದ ನಟಿಗೆ ದೊಡ್ಡ ಅವಕಾಶವನ್ನು ನೀಡಿದ್ದಾರೆ. ರುಕ್ಮಿಣಿ ವಸಂತ್ ಸಹ ಪ್ರೀತಿಯಿಂದ ಈ ಅವಕಾಶವನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರದ್ದು ಡೀ-ಗ್ಲಾಮರಸ್ ಪಾತ್ರ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಜೂ ಎನ್‌ಟಿಆರ್, ಸಿನಿಮಾದಲ್ಲಿ ಎರಡು ಶೇಡ್ನಲ್ಲಿ ನಟಿಸಲಿದ್ದು, ರುಕ್ಮಿಣಿ ವಸಂತ್ಗೆ ಸಹ ಎರಡು ಷೇಡ್ನ ಪಾತ್ರವಿದೆ ಎನ್ನಲಾಗುತ್ತಿದೆ.
ರುಕ್ಮಿಣಿ ವಸಂತ್, ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಬಘೀರ’ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಕ್ಕೂ ಮುಂಚೆಯೇ ಆ ಸಿನಿಮಾದಲ್ಲಿ ಅವರು ನಟಿಸಿದ್ದರು. ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದಲ್ಲಿಯೂ ರುಕ್ಮಿಣಿ ನಟಿಸಿದ್ದು ಆ ಸಿನಿಮಾ ಸಹ ಶೀಘ್ರವೇ ತೆರೆಗೆ ಬರಲಿದೆ.
ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಜೊತೆಗೆ ನಟಿಸಿರುವ ‘ಏಸ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ. ಶಿವಕಾರ್ತಿಕೇಯನ್ ಮುಂದಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದು, ವಿಭಿನ್ನ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ತೆಲುಗಿನ ಕೆಲವು ಸಿನಿಮಾಗಳ ಮಾತುಕತೆ ಕೂಡ ಆಗಿದೆ. ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






