Sabarimala: ಶಬರಿಮಲೆ ಸನ್ನಿದಾನದಲ್ಲೇ ಆತ್ಮಹತ್ಯೆಗೆ ಶರಣಾದ ಅಯ್ಯಪ್ಪ ಮಾಲಾಧಾರಿ!

ರಾಮನಗರ: ಶಬರಿಮಲೆಗೆ ತೆರಳಿದ್ದ ಸಂದರ್ಭದಲ್ಲಿ ಮಲ್ಲಿಕ್ ಪುರಂ ಮೇಲ್ಸೇತುವೆ ಮೇಲಿಂದ ವ್ಯಕ್ತಿ ಜಿಗಿದು ಮೃತಪಟ್ಟಿರುವ ಘಟನೆ ನಡೆದಿದ್ದು, ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು.
ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಕುಮಾರ್‌ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






