Saif Ali Khan: ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ್ದ ಆರೋಪಿ ಅರೆಸ್ಟ್..!

ಜನವರಿ 19, 2025 - 11:14
 0  9
Saif Ali Khan: ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ್ದ ಆರೋಪಿ ಅರೆಸ್ಟ್..!

ಬಾಲಿವುಡ್ ನಟ ಸೈಫ್ಅಲಿ ಖಾನ್ಗೆ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ..ಇನ್ನೂ ಚಾಕು ಇರಿತ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಿಂದೆ ಛತ್ತೀಸ್ಘಡ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮುಂಬೈನಲ್ಲಿಯೇ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ ಈತ ಎನ್ನಲಾಗಿದೆ.

ಸೈಫ್ ಅಲಿ ಖಾನ್ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿ ವಿಜಯ್ ದಾಸ್ ಅನ್ನು ಬಂಧಿಸಲಾಗಿದೆ. ಸಿಕ್ಕಿ ಬೀಳುವ ಭಯದಲ್ಲಿ ಈತ ಹೆಸರು ಬದಲಾವಣೆ ಮಾಡಿಕೊಂಡಿದ್ದ ಹಾಗೂ ಮುಂಬೈನಿಂದ ಪರಾರಿಯಾಗುವ ಯತ್ನದಲ್ಲಿದ್ದ ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು ಸಹ ಬಂಧಿಸಲಾಗಿದೆ. ಈಗ ಮುಂಬೈನಲ್ಲಿ ಒಬ್ಬಾತನ ಬಂಧನ ಆಗಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow