Salman Khan: ಎಷ್ಟು ಆಯಸ್ಸು ದೇವರು ಕೊಟ್ಟಿದ್ದಾನೋ ಅಷ್ಟೇ ಬದುಕುತ್ತೇನೆ: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್!

ಸಲ್ಮಾನ್ ಖಾನ್ ನಟನೆಯ ‘ಸಿಖಂಧರ್’ ಸಿನಿಮಾ ಮಾರ್ಚ್ 30ರಂದು ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ‘ಸಿಖಂಧರ್’ ಸಿನಿಮಾನಲ್ಲಿ ಸಲ್ಮಾನ್ ಖಾನ್ ಜೊತೆಗೆ ರಶ್ಮಿಕಾ ಮಂದಣ್ಣ ಸಹ ನಟಿಸಿದ್ದಾರೆ. ಇದೇ ಸಮಯದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಸಲ್ಮಾನ್ ಖಾನ್, ಎಷ್ಟು ವರ್ಷ ದೇವರು ಬರೆದಿದ್ದಾನೋ ಅಷ್ಟು ವರ್ಷ ಬದುಕುತ್ತೇನೆ. ನನ್ನ ಭವಿಷ್ಯ ದೇವರ ಕೈಯಲ್ಲಿದೆ ಎಂದಿದ್ದಾರೆ.
ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ, ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ. ಒಟ್ನಲ್ಲಿ ತಮಗೆ ರಕ್ಷಣೆ ಅದೆಷ್ಟು ಮುಖ್ಯ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಪ್ರತಿದಿನ ಭದ್ರತೆಯೊಂದಿಗೆ ಓಡಾಡುವುದು, ದಿನಚರಿ ಕೆಲಸಗಳಿಗೆ ಹಾಗೂ ಜನರೊಂದಿಗೆ ತಿರುಗಾಡುವುದು ಕೂಡ ಕಷ್ಟ ಎಂದು ಮುಕ್ತವಾಗಿ ಸಲ್ಮಾನ್ ಮಾತನಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






