Sanjiv Khanna: ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ!

ನವದೆಹಲಿ: ಮುಂದಿನ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು, ಶಿಫಾರಸು ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ಖನ್ನಾ ಅವರ ಹೆಸರನ್ನು ಈ ಹುದ್ದೆಗೆ ಸೂಚಿಸಿದ್ದಾರೆ.
ಮುಂದಿನ ನವೆಂಬರ್ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಚಂದ್ರಚೂಡ್ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಅವರ ಹೆಸರನ್ನ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






