SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ! ಇಂದೇ ಅರ್ಜಿ ಸಲ್ಲಿಸಿ
ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 5,583 ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಸೇವೆ ಮತ್ತು ಬೆಂಬಲ) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 6ರಿಂದ ಆರಂಭಗೊಂಡಿದ್ದು, ಆಗಸ್ಟ್ 26ರ ಮಧ್ಯರಾತ್ರಿ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಹತೆ:
-
ಅಭ್ಯರ್ಥಿ ಪದವಿ ಪೂರ್ಣಗೊಳಿಸಿರಬೇಕು.
-
ಕನಿಷ್ಠ ವಯಸ್ಸು 20 ವರ್ಷ, ಗರಿಷ್ಠ 28 ವರ್ಷ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 26,730 ಮೂಲ ವೇತನ ನೀಡಲಾಗುತ್ತದೆ. ವಿವಿಧ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಸೇರಿಸಿದರೆ, ಮುಂಬೈನಂತಹ ಮೆಟ್ರೋ ನಗರಗಳಲ್ಲಿ ಒಟ್ಟು ಆರಂಭಿಕ ಸಂಬಳವು ಸುಮಾರು ರೂ. 46,000 ತಲುಪುತ್ತದೆ.
ಅರ್ಜಿ ಶುಲ್ಕ:
-
ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ ರೂ. 750.
-
SC, ST ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ.
ಅರ್ಜಿ ಸಲ್ಲಿಸುವ ವಿಧಾನ:
-
ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ.
-
“Career” ವಿಭಾಗದಲ್ಲಿ Current Openings ಕ್ಲಿಕ್ ಮಾಡಿ.
-
Junior Associates Recruitment 2025 ಲಿಂಕ್ ಆಯ್ಕೆ ಮಾಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಖಾಲಿ ಹುದ್ದೆಗಳು:
ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹುದ್ದೆಗಳು ಲಭ್ಯವಿದ್ದು, ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ಬಿಹಾರ, ಜಾರ್ಖಂಡ್, ಅಸ್ಸಾಂ, ಜಮ್ಮು-ಕಾಶ್ಮೀರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?