Shivamogga: ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದವರ ಬಾಳಲ್ಲಿ ಘೋರ ದುರಂತ..!

ಸೆಪ್ಟೆಂಬರ್ 11, 2025 - 13:59
 0  17
Shivamogga: ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದವರ ಬಾಳಲ್ಲಿ ಘೋರ ದುರಂತ..!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮದುವೆ ನಿಗದಿಯಾಗಿದ್ದ ಜೋಡಿ ದುರ್ಮರಣ ಹೊಂದಿದೆ.

ಮೃತರು ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಎಂದು ಗುರುತಿಸಲಾಗಿದೆ. ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬಸವನಗೌಡ ಮತ್ತು ರೇಖಾ ಇಬ್ಬರ ಮದುವೆ ನಿಶ್ಚಯವಾಗಿದ್ದು, ವಿವಾಹದ ದಿನಾಂಕವನ್ನು ಇನ್ನೂ ನಿಗದಿಪಡಿಸಿರಲಿಲ್ಲ. ಶೀಘ್ರದಲ್ಲೇ ವಿವಾಹವಾಗುವ ಯೋಜನೆಯಲ್ಲಿದ್ದರು.

ಈ ದುರಂತವು ಇವರ ಕುಟುಂಬ ಮತ್ತು ಸ್ನೇಹಿತರಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಸ್ಥಳೀಯರು ಈ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow