SHOCKING: ಬೆಂಗಳೂರಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ: ಅಣ್ಣನ ಜೊತೆಗೆ ಹೊರಟಿದ್ದ ತಂಗಿಯನ್ನು ಎಳೆದೊಯ್ದು ಅತ್ಯಾಚಾರ!

ಎಪ್ರಿಲ್ 3, 2025 - 10:41
 0  15
SHOCKING: ಬೆಂಗಳೂರಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ: ಅಣ್ಣನ ಜೊತೆಗೆ ಹೊರಟಿದ್ದ ತಂಗಿಯನ್ನು ಎಳೆದೊಯ್ದು ಅತ್ಯಾಚಾರ!

ಬೆಂಗಳೂರು: ಅರೇ ಏನಾಗುತ್ತಿದೆ ಬೆಂಗಳೂರಿನಲ್ಲಿ ದಿನಬೆಳಗಾದ್ರೆ ಸಾಕು ಜನದಟ್ಟನೆಯಿಂದ, ಜನಸಾಗರದಿಂದ ತುಂಬಿ ತುಳುಕುತ್ತಿದ್ದ ಸಿಲಿಕಾನ್ ಸಿಟಿ ಮಂದಿ ಇತ್ತೀಚೆಗೆ ಕೆಲಸುದ್ದಿಗಳಿಂದ ಬೆಚ್ಚಿ ಬೀಳುತ್ತಿದ್ದಾರೆ. ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕಾಮುಕರ ಅಟ್ಟಹಾಸ. ದಿನಬೆಳಗಾದ್ರೆ ಸಾಕು ಈಗ ಅತ್ಯಾಚಾರ, ದರೋಡೆ, ಕೊಲೆ ಪ್ರಕರಣಗಳೇ ಬೆಂಗಳೂರಿನಲ್ಲಿ ಕೇಳಿಬರುತ್ತಿದೆ.

ಇದೀಗ ಅಣ್ಣನ ಜೊತೆ ಹೊರಟಿದ್ದ ತಂಗಿಯನ್ನ ಎಳೆದೊಯ್ದು ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರ ರೈಲು ನಿಲ್ದಾಣ ಸಮೀಪ ನಿನ್ನೆ ರಾತ್ರಿ 1.30 ರಲ್ಲಿನಡೆದಿದೆ. ಬಿಹಾರ ಮೂಲದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರ ಮಾಡಲಾಗಿದೆ.

ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಇದಕ್ಕೂ ಮುನ್ನ, ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಳು. ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು.

ಬಳಿಕ, ಊಟಕ್ಕಾಗಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್ ಅಡ್ಡಗಟ್ಟಿದ್ದಾರೆ. ಅಪರಿಚಿತರು ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ದುಷ್ಕೃತ್ಯದ ವೇಳೆ ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಒಬ್ಬ ಆರೋಪಿಯನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಮಹದೇವಪುರ ಪೊಲೀಸರು ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow