Shocking News: ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಗ್ಯಾಂಗ್‌ ರೇಪ್..!‌

ಮಾರ್ಚ್ 29, 2025 - 22:00
 0  11
Shocking News: ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಗ್ಯಾಂಗ್‌ ರೇಪ್..!‌

ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ.

 ಸ್ಮಶಾನಕ್ಕೆ ಕರೆದೊಯ್ದರೆ ಆ ಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಮೋದಿ ನಗರದ ನಿವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಲ್ಲಿ ಒಬ್ಬರು ಬಾಲಕಿಯನ್ನು ನೀರಿನ ಟ್ಯಾಂಕ್ ಬಳಿ ಕರೆದರು ಮತ್ತು ಸಂತ್ರಸ್ತೆ ಅಲ್ಲಿಗೆ ತಲುಪಿದಾಗ, ಆರೋಪಿ ಮತ್ತು ಆತನ ಸ್ನೇಹಿತ ಆಕೆಯನ್ನು ತಮ್ಮ ಮೋಟಾರ್ ಸೈಕಲ್‌ನಲ್ಲಿ ಬಲವಂತವಾಗಿ ಸ್ಮಶಾನಕ್ಕೆ ಕರೆದೊಯ್ದರು. ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಮತ್ತೊಬ್ಬ ಆರೋಪಿ ಸುತ್ತಮುತ್ತಲಿನ ಪ್ರದೇಶದ ಮೇಲೆ ಕಣ್ಣಿಟ್ಟಿದ್ದ.

ಸಂತ್ರಸ್ತೆ ಕೂಗಾಡಿದಾಗ ಆರೋಪಿ ಆಕೆಯ ಬಾಯಿಯನ್ನು ಬಟ್ಟೆಯಿಂದ ಮುಚ್ಚಿ ಥಳಿಸಿದ್ದಾನೆ ಎಂದು ಅವರು ಹೇಳಿದರು. ಆರೋಪಿಗಳು ಸಂತ್ರಸ್ತೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow