SHOCKING: ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ..! ಬಾಲಕಿ ಈಗ 6 ತಿಂಗಳ ಗರ್ಭಿಣಿ

ಮೈಸೂರು: ಮಾನವೀಯತೆಯೇ ನಾಚಿಕೆ ಪಡುವಂತಹ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ.ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚತ್ತಲೇ ಇದೆ. ಇದೀಗ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ ನಡೆದು ಬಾಲಕಿ ಗರ್ಭಿಣಿ ಆಗಿರುವ ಘಟನೆ ನಡೆದಿದೆ. ಇನ್ನೂ ಈ ಘಟನೆ ಸಂಬಂಧ ಕಾಮುಕ ಚಿಕ್ಕಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ ಚಿಕ್ಕಪ್ಪ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
10ನೇ ತರಗತಿ ಓದುತ್ತಿದ್ದ ಅಪ್ರಾಪ್ತೆ ಮೇಲೆ ಪಾಪಿ ಚಿಕ್ಕಪ್ಪ ಅತ್ಯಾಚಾರವೆಸಗಿದ್ದಾನೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ಕಾಮುಕ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ತಿಳಿಸಿ ಅಮಾಯಕನಂತೆ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ಪಿರಿಯಡ್ಸ್ನಲ್ಲಿ ವ್ಯತ್ಯಾಸ ಕಂಡುಬಂದು ಹೊಟ್ಟೆ ನೋವಿದೆ ಎಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






