Shootout & Robbery Case: ಬೀದರ್ ದರೋಡೆಕೋರರ ಸುಳಿವು ಕೊಟ್ಟವ್ರಿಗೆ ₹5ಲಕ್ಷ ಬಹುಮಾನ ಘೋಷಣೆ!

ಫೆಬ್ರವರಿ 15, 2025 - 18:00
 0  12
Shootout & Robbery Case: ಬೀದರ್ ದರೋಡೆಕೋರರ ಸುಳಿವು ಕೊಟ್ಟವ್ರಿಗೆ ₹5ಲಕ್ಷ ಬಹುಮಾನ ಘೋಷಣೆ!

ಬೀದರ್‌ನಲ್ಲಿ ನಡೆದ ಶೂಟ್ ಔಟ್ ಹಾಗೂ ಹಣ ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಘಟನೆ ನಡೆದು ಒಂದು ತಿಂಗಳು ಕಳೆದರೂ ಆರೋಪಿಗಳು ಇನ್ನೂವರೆಗೂ ಪತ್ತೆಯಾಗಿಲ್ಲ. ಪೊಲೀಸರು ಆರೋಪಿಗಳಿಗಾಗಿ ಎಲ್ಲಕಡೆ ಬಲೆ ಬೀಸಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಈ ನಡುವೆ ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹೌದು ಬಿಹಾರ್ ಮೂಲದ ದರೋಡೆಕೋರರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜನವರಿ 16 ರಂದು ಬೀದರ್‌ನಲ್ಲಿ ಹಾಡುಹಗಲೇ ಸಿನಿಮೀಯ ರೀತಿ ದರೋಡೆಯೊಂದು ನಡೆದಿತ್ತು. ಗಡಿ ಜಿಲ್ಲೆಯ ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದರು.

ಬೀದರ್​ ನಗರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನ್ಯಾಯಾಲಯದ ಸನಿಹದಲ್ಲಿನ ಎಟಿಎಮ್​ನಲ್ಲಿ ಹಣ ಹಾಕಲು ಬಂದಿದ್ದ ಸಿಎಂಎಸ್ ಏಜೆನ್ಸ್ ಸಿಬ್ಬಂದಿಗಳ ಮೇಲೆ ಬೈಕ್​ನಲ್ಲಿ ಬಂದಿದ್ದ ಮುಸುಕುದಾರಿ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದರು. ಎಟಿಎಂಗೆ ಹಣ ಹಾಕುತ್ತಿದ್ದ ಸಿಎಂಎಸ್ ಎಜೆನ್ಸಿಯ ಗಿರಿ ವೆಂಕಟೇಶ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಬೆಳಗ್ಗೆ 10:55 ಸುಮಾರಿಗೆ ಬೈಕ್​ನಲ್ಲಿ ಬಂದ ಮುಸುಕುದಾರಿ ಇಬ್ಬರು ದರೋಡೆಕೋರರ ಗ್ಯಾಂಗ್ ಕಣ್ಣಿಗೆ ಖಾರದ‌ ಪುಡಿ ಎರಚಿ 10 ಸುತ್ತು ಗುಂಡು ಹಾರಿಸಿ 83 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆ ಕದ್ದೊಯ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ಮೃತ ಗಿರಿ ವೆಂಕಟೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಪೊಲೀಸರ ತಂಡ, ಬೆರಳಚ್ಚು ತಜ್ಞರು ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೀದರ್‌ ಜಿಲ್ಲಾ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಹಣದ ಪೆಟ್ಟಿಗೆ ತೆಗೆದುಕೊಂಡು ಹೋದ ಇಬ್ಬರು ಖದೀಮರ ಬೆನ್ನು ಬಿದ್ದಿರುವ ಪೊಲೀಸರು ಆರೋಪಿಗಳ ಚಲನವಲನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಈ ನಡುವೆ ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow