Siddaramaiah: ಆತ್ಮಸಾಕ್ಷಿಗಿಂತಲೂ ದೊಡ್ಡ ನ್ಯಾಯಾಲಯ ಇಲ್ಲ ಎಂದು ಸಿಎಂ ಹೇಳಿದ್ಯಾಕೆ..?

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.
ಡಾ ಹಗರಣ ಸಂಬಂಧ ತಮಗೆ ಯಾವುದೇ ಭಯವಿಲ್ಲ. ಕಾನೂನು ಹೋರಾಟಕ್ಕೆ ಸದಾ ಸಿದ್ಧ. ಅದನ್ನೇ ಮಾಡಲುತ್ತೇನೆಯೇ ವಿಹಃ ರಾಜೀನಾಮೆ ಕೊಡುವುದೇ ಇಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ಮುಡಾ ನಿವೇಶನಗಳನ್ನು ವಾಪಸ್ ಮಾಡುವುದಾಗಿ ಪತ್ರ ಬರೆದಿದ್ದಾರೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿದೆ.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






