Siddaramaiah: ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ: ಸಿಎಂ ಶಾಕಿಂಗ್ ಹೇಳಿಕೆ!

ಇದರ ಬೆನ್ನಲ್ಲೇ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದರು.
ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದಿದ್ದರು. ಜೆ.ಹೆಚ್.ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದ್ದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಢನಂಬಿಕೆಯನ್ನು ಅವರು ನಂಬಿರಲಿಲ್ಲ, ನಾನೂ ನಂಬಲಿಲ್ಲ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






