S.L Bhyrappa: ಪದ್ಮ ಭೂಷಣ ಪುರಸ್ಕೃತ ಸಾಹಿತಿ ಡಾ. SL ಭೈರಪ್ಪ ಇನ್ನಿಲ್ಲ

ಸೆಪ್ಟೆಂಬರ್ 24, 2025 - 15:20
 0  17
S.L Bhyrappa: ಪದ್ಮ ಭೂಷಣ ಪುರಸ್ಕೃತ ಸಾಹಿತಿ ಡಾ. SL ಭೈರಪ್ಪ ಇನ್ನಿಲ್ಲ

ಬೆಂಗಳೂರು: ಪ್ರಸಿದ್ಧ ಕನ್ನಡ ಸಾಹಿತಿ, ತತ್ವಜ್ಞಾನಿ ಮತ್ತು ಸರಸ್ವತಿ ಸಮ್ಮಾನ್‌ ಪುರಸ್ಕೃತ ಎಸ್‌.ಎಲ್‌. ಭೈರಪ್ಪ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಾಗಿದ್ದ ಬೈರಪ್ಪ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ನಿಧನದಿಂದ ನಾಡಿನ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 1931ರ ಆಗಸ್ಟ್ 20ರಂದು ಜನಿಸಿದ ಭೈರಪ್ಪ, ಕನ್ನಡ ಸಾಹಿತ್ಯದ ಪ್ರಮುಖ ಕಾದಂಬರಿಕಾರರಾಗಿದ್ದಾರೆ.

ಭೈರಪ್ಪನವರ ಕಾದಂಬರಿಗಳು ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿಯ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು, ಇಂಗ್ಲಿಷ್ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಿಗೆ ಅನುವಾದಗೊಂಡು ದೇಶಾದ್ಯಂತ ಜನಪ್ರಿಯವಾಗಿವೆ.

ಅವರು ಮೈಸೂರಿನಲ್ಲಿ ಪ್ರೌಢಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಪೂರ್ಣಗೊಳಿಸಿದ್ದು, ಎಂ.ಎ.ನಲ್ಲಿ ಸುವರ್ಣ ಪದಕ ಪಡೆದು ತೇರ್ಗಡೆಯಾದರು. ಬಳಿಕ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ” ಎಂಬ ಮಹಾಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow