SM Krishna: ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ವಿಧಿವಶ..!

ಡಿಸೆಂಬರ್ 10, 2024 - 07:29
 0  10
SM Krishna: ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ವಿಧಿವಶ..!

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದವರು ಎಸ್.ಎಂ.ಕೃಷ್ಣ.. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ , ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಕೃಷ್ಣ ಅವರಿಗೆ ಉಸಿರಾಟಕ್ಕೆ ತೊಂದರೆಯುಂಟಾಗಿ,ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow