SM ಕೃಷ್ಣ ಅಂತಿಮ ದರ್ಶನ ಪಡೆದ ರಮ್ಯಾ: ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದ ನಟಿ!

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಟಿ ರಮ್ಯಾ ಅವರು ಸದಾಶಿವನಗರ ಆಗಮಿಸಿ ಎಸ್ಎಂ ಕೃಷ್ಣ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದರು.
ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






