SM ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ: ಬುಧವಾರ ಸರ್ಕಾರಿ ರಜೆ ಘೋಷಣೆ

ಡಿಸೆಂಬರ್ 10, 2024 - 10:39
 0  21
SM ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ: ಬುಧವಾರ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು,  ರಾಜ್ಯ ಸರ್ಕಾರವು ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಎಸ್​ಎಂ ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.

ಹೌದು ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.

ಇದೇ ವೇಳೆ ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow