Spurious Liquor: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮೇ 13, 2025 - 16:02
 0  11
Spurious Liquor: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಮೃತಸರ: ಪಂಜಾಬ್‌ನ ಅಮೃತಸರ ಜಿಲ್ಲೆಯ ಮಜಿತಾ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಹದಿನೈದು ಜನರು ಸಾವನ್ನಪ್ಪಿದ್ದು, 10 ಜನರ ಸ್ಥಿತಿ ಗಂಭೀರವಾಗಿದೆ. ಸೋಮವಾರ ತಡರಾತ್ರಿ ನಡೆದ ಈ ದುರಂತವು, ರಾಜ್ಯವು ಮತ್ತೊಂದು ಅಕ್ರಮ ಮದ್ಯ ಸಂಬಂಧಿತ ವಿಪತ್ತನ್ನು ಎದುರಿಸುತ್ತಿರುವಾಗ, ಪೊಲೀಸರು ಮತ್ತು ನಾಗರಿಕ ಅಧಿಕಾರಿಗಳಿಂದ ವ್ಯಾಪಕ ತನಿಖೆಗೆ ನಾಂದಿ ಹಾಡಿದೆ.

ಹೌದು ಮಜಿತಾ ಕ್ಷೇತ್ರದ ಸುಮಾರು ಮೂರು ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಥಾರ್ಯೇವಾಲ್, ಮರಾರಿ ಮತ್ತು ಭಂಗಲಿ ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ ಹಲವು ಜನರು ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರು ಮಾತನಾಡಲು ಸಹ ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿಷಪೂರಿತ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿ ಮಣಿಂದರ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ಪ್ರಮುಖ ಕಿಂಗ್‌ಪಿನ್ ಸೇರಿದಂತೆ ಅವರ ಯಂತ್ರೋಪಕರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ 2 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow