SSLC ಪಾಸಾಗಿದ್ಯಾ? ಹಾಗಿದ್ರೆ ಈ ಖಾಲಿ ಹುದ್ದೆಗಳಿಗೆ ಇಂದೇ ಅಪ್ಲೈ ಮಾಡಿ!

ಡಿಸೆಂಬರ್ 20, 2024 - 08:06
 0  9
SSLC ಪಾಸಾಗಿದ್ಯಾ? ಹಾಗಿದ್ರೆ ಈ ಖಾಲಿ ಹುದ್ದೆಗಳಿಗೆ ಇಂದೇ ಅಪ್ಲೈ ಮಾಡಿ!

ನಿಮ್ಮದು SSLC ಪಾಸಾಗಿದ್ಯಾ? ಹಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗವಕಾಶ ಇದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇದ್ದು, ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಆಸಕ್ತರಿಗೆ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ

ಉದ್ಯೋಗಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್

ಒಟ್ಟು ಹುದ್ದೆಗಳು: 19

ಮಾಸಿಕ ವೇತನ: ನಿಯಮಾನುಸಾರ

ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ

ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ

ವಿದ್ಯಾರ್ಹತೆ
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಹೇಗೆ ನಡೆಯಲಿದೆ
ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್​ ಬಳಿಕ ಡ್ರೈವಿಂಗ್ ಟೆಸ್ಟ್​ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್‌ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow