SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ..! ಪರೀಕ್ಷಾ ಶುಲ್ಕದಲ್ಲಿ ಶೇ.5ರಷ್ಟು ಹೆಚ್ಚಳ

ಅಕ್ಟೋಬರ್ 7, 2025 - 11:59
 0  9
SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ..! ಪರೀಕ್ಷಾ ಶುಲ್ಕದಲ್ಲಿ ಶೇ.5ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ. ಈ ಬಾರಿ 10ನೇ ತರಗತಿ ವಾರ್ಷಿಕ ಪರೀಕ್ಷಾ ಶುಲ್ಕವನ್ನು 5% ಹೆಚ್ಚಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕಿಂತ ಶೇ.5ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುವುದು.

ಹೊಸ ಶುಲ್ಕ ವಿವರಗಳು:

  • ಪ್ರಥಮ ಬಾರಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ: ₹676 → ₹710

  • ಹೊಸದಾಗಿ ನೋಂದಾಯಿಸುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಹಾಗೂ ಅರ್ಜಿ ಶುಲ್ಕ: ₹236 → ₹248

  • ಈಗಾಗಲೇ ನೋಂದಣಿಯಾಗಿರುವ ಖಾಸಗಿ ಅಭ್ಯರ್ಥಿಗಳ ನವೀಕರಣ ಶುಲ್ಕ: ₹69 → ₹72

  • ಪುನರಾವರ್ತಿತ ಶಾಲಾ/ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ:

    • ಒಂದು ವಿಷಯಕ್ಕೆ: ₹427 → ₹448

    • ಎರಡು ವಿಷಯಕ್ಕೆ: ₹532 → ₹559

    • ಮೂರು ಅಥವಾ ಹೆಚ್ಚು ವಿಷಯಗಳಿಗೆ: ₹716 → ₹752

ಪರೀಕ್ಷಾ ಶುಲ್ಕ ಏರಿಕೆಗೆ ಪೋಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಈ ನಿರ್ಧಾರದಿಂದ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಆರ್ಥಿಕ ಭಾರ ಉಂಟಾಗಲಿದೆ, ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಸರ್ಕಾರವು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow