Stampede Case: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಕಾರಣ ಯಾರು..? ಮೈಕೆಲ್ ಡಿ.ಕುನ್ಹಾ ಆಯೋಗದ ವರದಿಯಲ್ಲಿ ಏನಿದೆ..?

ಇನ್ನೂ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಏಕಸದಸ್ಯದ ತನಿಖಾ ಆಯೋಗದ ವರದಿಯಲ್ಲಿ ಕೆಲವು ಪ್ರಮುಖ ಅಂಶಗಳನ್ನು ಪಟ್ಟಿ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕೆಎಸ್ ಸಿಎ, ಡಿಎನ್ಎ, ಅರ್ಸಿಬಿ ಹಾಗೂ ಪೊಲೀಸರು ನೇರ ಹೊಣೆ ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗ್ತಿದೆ.
ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂದು ತಿಳಿದಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ.
ಕಾರ್ಯಕ್ರಮ ಆಯೋಜಿಸಿದ ಬಳಿಕವೂ ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ. ಅಷ್ಟು ದೊಡ್ಡ ಕಾರ್ಯಕ್ರಮ ಆಯೋಜಿಸಿದರೂ ಕ್ರೀಡಾಂಗಣದ ಒಳಗೆ ಕೇವಲ 79 ಪೊಲೀಸರು ಮಾತ್ರ ಇದ್ದರು. ಹೊರಗೆ ಯಾವ ಪೊಲೀಸರೂ ಇರಲಿಲ್ಲ. ಆಂಬ್ಯುಲೆನ್ಸ್ ವ್ಯವಸ್ಥೆಯೂ ಮಾಡಿರಲಿಲ್ಲ ಎನ್ನಲಾಗಿದೆ.
ಆರ್ಸಿಬಿ ವಿಜಯೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು. ಚಿನ್ನಸ್ವಾಮಿ ಸ್ಟೇಡಿಯಂಗೆ ಉಚಿತ ಎಂಟ್ರಿ ಎಂದು ತಿಳಿಸಿ ದೊಡ್ಡ ಪ್ರಮಾದವನ್ನೇ ಸೃಷ್ಟಿಸಿದರು. 3.25ಕ್ಕೆ ಕಾಲ್ತುಳಿತ ಸಂಭವಿಸಿದರೂ, 5.30ರವರೆಗೆ ಪೊಲೀಸ್ ಕಮಿಷನರ್ಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲದೇ ಜಂಟಿ ಪೊಲೀಸ್ ಅಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದು 4 ಗಂಟೆಗೆ ಏಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






