Sucide Case: ಫೇಸ್ಬುಕ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡ ವ್ಯಕ್ತಿ!

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಖಾಸಗಿ ಶಾಲೆ ಬಳಿ ವ್ಯಕ್ತಿಯೊಬ್ಬರು ಫೇಸ್ಬುಕ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
35 ವರ್ಷದ ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಪ್ರವೀಣ್ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೆಲ ವ್ಯಕ್ತಿಗಳ ಟಾರ್ಚರ್ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನಾಗಿದ್ದ ಪ್ರವೀಣ್ ಗೌಡ ಬೇಲೂರು, ಫೇಸ್ಬುಕ್ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾವಿಗೆ ಕಾರಣ ಏನು ಅನ್ನೋದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ನನ್ನ ಸಾವಿಗೆ ಕಾರಣಕರ್ತರು ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






