Suhas Shetty Case: ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಬಂತಾ ಹಣ..? ಕೃತ್ಯದ ಹಿಂದೆ ಕಾಣದ ಕೈಗಳ ಕೈವಾಡ ಶಂಕೆ!

ಮಂಗಳೂರು: ಹಿಂದೂ ಸಂಘಟನಾ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಇಡೀ ಮಂಗಳೂರು ಧಗಧಗ ಅಂತ ಉರಿಯುತ್ತಿದೆ. ಸದ್ಯ ಕಡಲನಗರಿ ದಕ್ಷಿಣ ಕನ್ನಡದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನು ಸುಹಾಸ್ ಶೆಟ್ಟಿ ಹತ್ಯೆ ಮಾಡಿದ್ದಲ್ಲದೇ ಆ ಕೃತ್ಯದ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದನ್ನು ನೋಡಿದ್ರೆ ಎಂತಹ ಕಲ್ಲು ಹೃದಯವೂ ಕರಗಿ ಹೋಗುತ್ತೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲೂ ಭಾರಿ ವಿವಾದಕ್ಕೆ ಗುರಿಯಾಗಿತ್ತು.
ಇದರ ನಡುವೆ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಅನೇಕ ಕಾಣದ ಕೈಗಳ ಕೈವಾಡ ಶಂಕೆ ವ್ಯಕ್ತವಾಗಿದ್ದು,
ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಹತ್ಯೆ ನಡೆಸಲು ನೆರವು ನೀಡುವಂತೆ ಪ್ರಮುಖ ಆರೋಪಿ ಸಫ್ವಾನ್ ಅನೇಕರನ್ನು ಸಂಪರ್ಕಿಸಿದ್ದ. ಆ ಸಂದರ್ಭದಲ್ಲಿ ಜೈಲು, ಜಾಮೀನಿಗೆ ನೆರವಿಗಾಗಿ ಕೈಚಾಚಿದ್ದ ಎನ್ನಲಾಗಿದೆ. ಕೊಲೆ ಮಾಡಿದ ಕೂಡಲೇ ಪೊಲೀಸರಿಗೆ ಶರಣಾಗುವ ಬಗ್ಗೆಯೂ ಹಂತಕರ ಗುಂಪು ಚರ್ಚೆ ನಡೆಸಿತ್ತು. ಹಂತಕರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಾಣದ ಕೈಗಳ ಗುಂಪು ಮಾಡಿತ್ತೇ ಎಂಬ ಬಲವಾದ ಅನುಮಾನ ಸೃಷ್ಟಿಯಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






