Sukri Bommagowda: ಪ್ರದ್ಮಶ್ರೀ ಪ್ರಶಸ್ತಿ ವಿಜೇತೆ ಅಂಕೋಲಾದ ಸುಕ್ರಿ ಬೊಮ್ಮಗೌಡ ವಿಧಿವಶ!

ಫೆಬ್ರವರಿ 13, 2025 - 10:33
 0  12
Sukri Bommagowda: ಪ್ರದ್ಮಶ್ರೀ ಪ್ರಶಸ್ತಿ ವಿಜೇತೆ ಅಂಕೋಲಾದ ಸುಕ್ರಿ ಬೊಮ್ಮಗೌಡ ವಿಧಿವಶ!

ಕಾರವಾರ: ಹಾಲಕ್ಕಿ ಒಕ್ಕಲಿಗ ಸುಪ್ರಸಿದ್ಧ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದುಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.

ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗೆ ಪಂಗಡಕ್ಕೆ ಸೇರಿದವರು. ಸಾಂಪ್ರಾದಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ, ಪುರಸ್ಕಾರಗಳು ಅವರಿಗೆ ಲಭಿಸಿವೆ.

ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನ ಕಲಿಸಿ ಕೊಡುತ್ತಾರೆ. ಆ ಮೂಲಕ ಅದರ ಉಳಿವಿಗೆ ಶ್ರಮಿಸಿದ್ದಾರೆ. ಸಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದು ಮತ್ತು ಹಾಲಕ್ಕಿ ಕೋಗಿಲೆ/ ಜನಪದ ಕೋಗಿಲೆ ಎಂದೂ ಕರೆಯಲ್ಪಟ್ಟಿದ್ದಾರೆ.

ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದರು. ಹಾಗೂ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾಲಕ್ಕಿ ಸಮುದಾಯ ತುಳಸಿ ಗೌಡ ಬೆನ್ನಲ್ಲೇ ಇದೀಗ ಸುಕ್ರಿ ಬೊಮ್ಮಗೌಡ ಅವರನ್ನೂ ಸಹ ಕಳೆದುಕೊಂಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow