Sunita Williams: 9 ತಿಂಗಳ ಬಳಿಕ ಮತ್ತೆ ಭೂಮಿಗೆ ವಿಲಿಯಮ್ಸ್: ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ

ಮಾರ್ಚ್ 18, 2025 - 18:02
 0  15
Sunita Williams: 9 ತಿಂಗಳ ಬಳಿಕ ಮತ್ತೆ ಭೂಮಿಗೆ ವಿಲಿಯಮ್ಸ್: ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುದಿದ್ದಾರೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳಲು ಕಾತುರದಿಂದ ಕಾಯುತ್ತಿದ್ದಾರೆ.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತದ ಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪತ್ರ ಬರೆದಿದ್ದಾರೆ. ‘‘ನೀವು ಸಾವಿರಾರು ಮೈಲುಗಳಷ್ಟು ದೂರವಿದ್ದರೂ ಸದಾ ನಮ್ಮ ಹೃದಯಕ್ಕೆ ಹತ್ತಿರವಾಗಿರುತ್ತೀರಿ’’ ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿ ಮೈಕ್ ಮಾಸ್ಸಿಮಿನೊ ಮೂಲಕ ಸುನಿತಾಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಪತ್ರವು 143 ಕೋಟಿ ಭಾರತೀಯರ ಹೆಮ್ಮೆಯನ್ನು ಪ್ರತಿಬಿಂಬಿಸುತ್ತದೆ. ಕೆಲವು ದಿನಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ಮಾಸ್ಸಿಮಿನೊ ಅವರನ್ನು ಭೇಟಿಯಾಗಿ ತಮ್ಮ ಭಾರತದ ಜನರ ಪರವಾಗಿ ಈ ಪತ್ರವನ್ನು ಸುನಿತಾಗೆ ತಲುಪಿಸಬೇಕೆಂದು ಮನವಿ ಮಾಡಿದ್ದರು.

ಅವರ ಸುರಕ್ಷಿತ ಮರಳುವಿಕೆಗೆ ಹಾರೈಸುತ್ತಾ ಪ್ರಧಾನಿ ಮೋದಿ ಭಾರತದ ಶ್ರೇಷ್ಠ ಮಗಳೊಂದಿಗಿನ ಆಳವಾದ ಬಾಂಧವ್ಯವನ್ನು ಪುನರುಚ್ಚರಿಸಿದರು. ಈ ಕುರಿತು ಸಚಿವ ಜಿತೇಂದ್ರ ಸಿಂಗ್ ಪ್ರಧಾನಿ ಮೋದಿಯವರ ಪತ್ರವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow