Sunita Williams: 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ: ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ನಾಸಾ ವಿಜ್ಞಾನಿ, ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಕಳೆದ 9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಇದ್ದರು. ತಾಂತ್ರಿಕ ಸಮಸ್ಯೆಯಿಂದ ಅವರು ಭೂಮಿಗೆ ಬರಲು ಸಾಧ್ಯವಾಗಿರಲಿಲ್ಲ. ಕಡೆಗೂ ಅವರ ಬಾಹ್ಯಾಕಾಶ ವಾಸ ಮುಗಿದಿದ್ದು ಭೂಮಿಗೆ ಸುರಕ್ಷಿತವಾಗಿ ವಾಪಾಸಾಗಿದ್ದಾರೆ.
ಸುನೀತಾ ವಿಲಿಯಮ್ಸ್, ಬುಚ್ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನ ಮಂಗಳವಾರ ರಾತ್ರಿ 8.35ಕ್ಕೆ 400 ಕಿ.ಮೀ ದೂರದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯತ್ತ ಪಯಣ ಆರಂಭಿಸಿತ್ತು. ನಿರಂತರ 17 ಗಂಟೆಗಳ ಪಯಣದ ಬಳಿಕ ಭಾರತೀಯ ಕಾಲಮಾನ, ಸರಿಯಾಗಿ ಇಂದು ನಸುಕಿನ 3.27ರ ಸಮಯಕ್ಕೆ ಅಮೆರಿಕದ ಫ್ಲೋರಿಡಾ ಸಾಗರದಲ್ಲಿ ಲ್ಯಾಂಡ್ ಆಗಿದೆ.
ಸುನೀತಾ ವಿಲಿಯಮ್ಸ್ ಸೇರಿ ನಾಲ್ವರು ಗಗನಯಾತ್ರಿಗಳಿದ್ದ ನೌಕೆಯ ಕ್ಯಾಪ್ಸುಲ್ ಸಮುದ್ರದಲ್ಲಿ ಬಿದ್ದು ತೇಲುತ್ತಿದ್ದಂತೆಯೇ ಕೆಲವೇ ಕ್ಷಣಗಳಲ್ಲಿ ಮೂರು ಬೋಟ್ಗಳಲ್ಲಿ ಅಮೆರಿಕ ನೌಕಾಪಡೆ ಸ್ಥಳಕ್ಕೆ ಧಾವಿಸಿತು. ಈಗಾಗಲೇ ಸಿದ್ಧವಾಗಿ ನಿಂತಿದ್ದ ಸ್ಪೇಸ್ ಎಕ್ಸ್ನ ರಿಕವರಿ ಶಿಪ್ ಕೂಡ ಸ್ಥಳಕ್ಕೆ ಧಾವಿಸಿತು.
ನಂತರ ನೌಕಾಪಡೆ ಸಿಬ್ಬಂದಿ ಮೊದಲಿಗೆ ಗಗನಯಾತ್ರಿಗಳಿದ್ದ ಕ್ಯಾಪ್ಸುಲ್ ನಿಯಂತ್ರಣಕ್ಕೆ ರೋಪ್ಗಳಿಂದ ಕಟ್ಟಿ ಹಡಗಿನ ಬಳಿಗೆ ಎಳೆದೊಯ್ದರು. ಬಳಿಕ ಅತ್ಯಂತ ನಾಜೂಕಾಗಿ ಕ್ಯಾಪ್ಸುಲ್ ಅನ್ನು ಹಡಗಿಗೆ ಸ್ಥಳಾಂತರ ಮಾಡಿದರು. ಇದಾದ ಕೆಲವೇ ಹೊತ್ತಿನಲ್ಲಿ ನಟ್ಟು, ಬೋಲ್ಟ್ಗಳಿಂದ ಟೈಟಾಗಿದ್ದ ಕ್ಯಾಪ್ಸುಲ್ನ ಡೋರ್ಅನ್ನು ತೆಗೆಯಲಾಯಿತು. ಮೊದಲಿಗೆ ನಾಸಾ ಗಗನಯಾತ್ರಿ ಹೇಗ್ರನ್ನು ಹೊರಗೆ ತರಲಾಯಿತು.
ನಿಮ್ಮ ಪ್ರತಿಕ್ರಿಯೆ ಏನು?






