Tirumala: ದನದ ಕೊಬ್ಬು ನಂತರ ಇದೀಗ ತಿರುಪತಿ ಲಡ್ಡುನಲ್ಲಿ ಗುಟ್ಕಾ ಪ್ಯಾಕೇಟ್ ಪತ್ತೆ!

ಸೆಪ್ಟೆಂಬರ್ 24, 2024 - 12:02
 0  7
Tirumala: ದನದ ಕೊಬ್ಬು ನಂತರ ಇದೀಗ ತಿರುಪತಿ ಲಡ್ಡುನಲ್ಲಿ ಗುಟ್ಕಾ ಪ್ಯಾಕೇಟ್ ಪತ್ತೆ!

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡಿನಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎನ್ನುವ ವಿಚಾರ ಸಾಬೀತಾಗುತ್ತಿದ್ದಂತೆ. ಪ್ರಮುಖ ದೇವಸ್ಥಾನದ ಪ್ರಸಾದದ ಗುಣಮಟ್ಟವನ್ನು ಪರಿಶೀಲಿಸಲು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.

ಗೊಲ್ಲಗುಡೆಂ ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್‌ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿರುವುದು ಇದೇ ಮೊದಲಲ್ಲ. 2012ರಲ್ಲೂ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಗಮನಾರ್ಹ. ಈಗಾಗಲೇ ತುಪ್ಪದಲ್ಲಿ ಕಲಬೆರಕೆ ವಿಷಯ ವಿವಾದವಾಗಿದ್ದು, ಈ ಬೆನ್ನಲ್ಲೇ ಗುಟ್ಕಾ ಪತ್ತೆಯಾಗಿದೆ ಎಂಬ ಆರೋಪವೂ ಚರ್ಚೆಗೆ ಗ್ರಾಸವಾಗಿದೆ. ಆಂಧ್ರಪ್ರದೇಶದ ತಿರುಪತಿ ದೇಗುಲದಲ್ಲಿ ಪ್ರಸಾದ ರೂಪದಲ್ಲಿ ನೀಡುತ್ತಿದ್ದ ಲಡ್ಡು ಈಗ ಮಹಾ ವಿವಾದಕ್ಕೆ ಕಾರಣವಾಗಿದೆ. ಲಡ್ಡುವಿನಲ್ಲಿಗೋವು, ಹಂದಿಯ ಕೊಬ್ಬು ಮಿಶ್ರಣ ಮಾಡಲಾಗಿದೆ, ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ ಬಳಿಕ ವಿವಾದ ಭುಗಿಲೆದ್ದಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow