TVK Stampede: ದಳಪತಿಗೆ ಸಿಂಗಂ ಸಪೋರ್ಟ್! ಪೊಲೀಸರೇ ನೇರ ಹೊಣೆ ಎಂದ ಅಣ್ಣಾಮಲೈ

ಸೆಪ್ಟೆಂಬರ್ 28, 2025 - 21:06
 0  18
TVK Stampede: ದಳಪತಿಗೆ ಸಿಂಗಂ ಸಪೋರ್ಟ್! ಪೊಲೀಸರೇ ನೇರ ಹೊಣೆ ಎಂದ ಅಣ್ಣಾಮಲೈ

ಕರೂರು ಕಾಲ್ತುಳಿತದ ಘಟನೆ ಬಳಿಕ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ತೀವ್ರ ಟೀಕೆಗೆ ಗುರಿ ಆಗಿದ್ದಾರೆ. ದುರಂತದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಗಾಯಾಳುಗಳು ಹಾಗೂ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗ್ಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ.ಕಾಲ್ತುಳಿತ ಘಟನೆಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

ವಿಜಯ್ ವಿರುದ್ಧ ಈ ಹಿಂದೆ ಸಾಕಷ್ಟು ಬಾರಿ ಹರಿಹಾಯ್ದಿದ್ದ ಅಣ್ಣಾಮಲೈ ಅವರು ಈ ಪ್ರಕರಣದಲ್ಲಿ ದಳಪತಿಯ ದೂಷಣೆ ಮಾಡಲಿಲ್ಲ. ತಾನು ವಿಜಯ್ ಅವರನ್ನು ನೇರವಾಗಿ ದೂಷಿಸುತ್ತಿಲ್ಲ ಎಂದೇ ಅಣ್ಣಾಮಲೈ ಹೇಳಿದ್ದಾರೆ. ಘಟನೆಯ ಸಿಬಿಐ ತನಿಖೆ ಆಗಬೇಕೆಂದೂ ಅಣ್ಣಾಮಲೈ ಈ ವೇಳೆ ಆಗ್ರಹಿಸಿದ್ದಾರೆ.

ತಮಿಳುನಾಡು ಪೊಲೀಸ್ ಹಲವು ಎಚ್ಚರಿಕೆಗಳ ನಡುವೆಯೂ ಗುಂಪನ್ನು ನಿಯಂತ್ರಿಸಲು ವಿಫಲವಾಗಿದೆ. 500 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಡಿಜಿಪಿ ಹೇಳುತ್ತಾರೆ. ಆದರೆ, ವಾಸ್ತವವಾಗಿ ಬೀದಿಯಲ್ಲಿ ಇದ್ದ ಪೊಲೀಸರ ಸಂಖ್ಯೆ 100ಕ್ಕಿಂತಲೂ ಕಡಿಮೆ. ಆಂಬುಲೆನ್ಸ್ಗಳೂ ಹೋಗದಷ್ಟು ಕಿರಿದಾದ ಬೀದಿಯಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವ ಮುನ್ನ ಪೊಲೀಸರು ನೂರು ಬಾರಿ ಯೋಚಿಸಬೇಕಿತ್ತು ಎಂದು ತಮಿಳುನಾಡು ಬಿಜೆಪಿ ನಾಯಕರು ವಾದಿಸಿದ್ದಾರೆ

‘ಈ ಲೋಪಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸತ್ಯಾಂಶ ಏನು ಎಂಬುದು ಸಿಬಿಐ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ ಎಂದು ಹೇಳಿದ ಅಣ್ಣಾಮಲೈ, ತಮಿಳುನಾಡಿನಲ್ಲಿ ಗುಂಪು ನಿಯಂತ್ರಣದ ಸಮಸ್ಯೆ ಪದೇ ಪದೇ ಬರುತ್ತಿದೆ. ಇದಕ್ಕೆ ಆಡಳಿತಾರೂಢ ಡಿಎಂಕೆ ಸರ್ಕಾರದ ನಿರ್ಲಕ್ಷ್ಯತೆಯೇ ಕಾರಣ ಎಂದು ಟೀಕಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow