Union Budget: ಅನ್ನದಾತರಿಗೆ ಸಿಕ್ತು ಭರ್ಜರಿ ಗುಡ್‌ ನ್ಯೂಸ್:‌ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಏರಿಕೆ!

ಫೆಬ್ರವರಿ 1, 2025 - 11:59
 0  34
Union Budget: ಅನ್ನದಾತರಿಗೆ ಸಿಕ್ತು ಭರ್ಜರಿ ಗುಡ್‌ ನ್ಯೂಸ್:‌ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಏರಿಕೆ!

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಇನ್ನೂ ಈ ಬಜೆಟ್‌ ಆರಂಭದಲ್ಲೇ ರೈರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.  ಬಜೆಟ್‌ ಆರಂಭದಲ್ಲೇ ಅನ್ನದಾತರಿಗೆ ಕೇಂದ್ರ ಸರ್ಕಾರ ಬಿಗ್‌ ಗಿಫ್ಟ್ ನೀಡಿದೆ ಅಂದ್ರೆ ತಪ್ಪಾಗಲ್ಲ.

ಮೊದಲಿನಿಂದಲೂ ಕೇಂದ್ರ ಸರ್ಕಾರ ಅನ್ನದಾತರಿಗಾಗಿಯೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದ್ರಲ್ಲಿ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ. 3 ಲಕ್ಷದವರೆಗೂ ಇದ್ದ ಕಿಸಾನ್‌ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷದವರೆಗೂ ಹೆಚ್ಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್​ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಕೆಸಿಸಿ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು ₹ 3,000 ರಿಂದ ₹ 5,000 ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.

ಅನ್ನದಾತರಿಗೆ ತಕ್ಷಣ ಸಾಲ ನೀಡುವ ಯೋಜನೆಯೇ ಕಿಸಾನ್‌ ಕ್ರೆಡಿಟ್‌ ಕಾರ್ಡ್ ಯೋಜನೆ.ರೈತರು ತಮ್ಮ ಬೆಳೆಗಳನ್ನು ಕಟಾವು ಮಾಡಲು ಸಮಯಕ್ಕೆ ಹಣವನ್ನು ಪಡೆಯಲು ಸಹಾಯ ಮಾಡಲು ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.a

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow