Vishnuvardhan: ಸಾಹಸಸಿಂಹ ವಿಷ್ಣುವರ್ಧನ್ ಫ್ಯಾನ್ಸ್​ʼಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್..!​

ಸೆಪ್ಟೆಂಬರ್ 17, 2025 - 12:09
 0  14
Vishnuvardhan: ಸಾಹಸಸಿಂಹ ವಿಷ್ಣುವರ್ಧನ್ ಫ್ಯಾನ್ಸ್​ʼಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್..!​

ಬೆಂಗಳೂರು:ಅಭಿಮಾನ್ ಸ್ಟುಡಿಯೊದಲ್ಲಿ ನಟ ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಗಾಗಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು,ಈ ಬಾರಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’  ಪ್ರಶಸ್ತಿ ಬಂದಿದೆ. ಆ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ. ಆದರೆ ಅದರ ನಡುವೆ ಒಂದು ಬೇಸರದ ಸುದ್ದಿ ಇದೆ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವಾದ ಅಭಿಮಾನ್ ಸ್ಟುಡಿಯೋದಲ್ಲಿ ಜನ್ಮದಿನ ಆಚರಣೆ ಮಾಡಲು ಹೈಕೋರ್ಟ್ ಅವಕಾಶ ನೀಡಿಲ್ಲ.

ಇತ್ತೀಚಿನ ದಿನಗಳಲ್ಲಿ ಅಭಿಮಾನ ಸ್ಟುಡಿಯೋಗೆ ಸಂಬಂಧಿಸಿದಂತೆ ಹಲವು ಬೆಳವಣಿಗೆಗಳು ನಡೆದಿವೆ. ಅಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದರಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ, ಆ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಚರ್ಚೆ ಶುರುವಾಗಿದೆ.

ಈ ನಡುವೆ, ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ, ಅಭಿಮಾನ ಸ್ಟುಡಿಯೋದಲ್ಲೇ ಹುಟ್ಟುಹಬ್ಬ ಆಚರಿಸಲು ಅನುಮತಿ ನೀಡುವಂತೆ ಮನವಿ ಮಾಡಿತ್ತು. ಆದರೆ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಲಾಗಿದೆ.

ಅಭಿಮಾನ್ ಸ್ಟೂಡಿಯೋ ಮಾಲಿಕತ್ವದ ಬಗ್ಗೆ ಹೈಕೋರ್ಟ್ ಆದೇಶವಿದೆ. 2025ರ ಜ.13ರ ಆದೇಶವಿರುವಾಗ ವಿಭಿನ್ನ ರೀತಿಯ ಆದೇಶ ಸಾಧ್ಯವಿಲ್ಲ’ ಎಂದು ನ್ಯಾ. ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ, ಕಾರ್ಯದರ್ಶಿ, ಅಭಿಮಾನ್ ಸ್ಟುಡಿಯೋದ ಬಿ.ಎಸ್. ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೆ ಸೂಚನೆ ನೀಡಲಾಗಿದೆ.

ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ, ಕಾರ್ಯದರ್ಶಿ ಮತ್ತು ಅಭಿಮಾನ ಸ್ಟುಡಿಯೋದ ಬಿ.ಎಸ್. ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೆ ಸೂಚಿಸಲಾಗಿದೆ.

ಅಭಿಮಾನ್ ಸ್ಟುಡಿಯೋ ಜಾಗದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಅಭಿಮಾನಿಗಳು ಮಾಡುತ್ತಿದ್ದಾರೆ. ಒಂದುವೇಳೆ ಆ ಜಾಗವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡರೆ ಅದರಲ್ಲಿ ಮತ್ತೆ ವಿಷ್ಣುವರ್ಧನ್ ಅವರ ಸಮಾಧಿ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಅಭಿಮಾನಿಗಳದ್ದು. ಆದರೆ ಸದ್ಯಕ್ಕಂತೂ ಅಲ್ಲಿ ಹುಟ್ಟುಹಬ್ಬ ಆಚರಿಸಲು ಅವಕಾಶ ಸಿಗುತ್ತಿಲ್ಲ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow