Women's T20 World Cup 2024: ಇಂದು ಭಾರತ-ಪಾಕ್ ಹೈವೋಲ್ಟೇಜ್ ಮ್ಯಾಚ್: ಸ್ಥಳ, ಸಮಯ, ಲೈವ್ ಸ್ಟ್ರೀಮ್ ಡಿಟೇಲ್ಸ್ ಇಲ್ಲಿದೆ..?

ಅಕ್ಟೋಬರ್ 6, 2024 - 12:01
 0  21
Women's T20 World Cup 2024: ಇಂದು ಭಾರತ-ಪಾಕ್ ಹೈವೋಲ್ಟೇಜ್ ಮ್ಯಾಚ್: ಸ್ಥಳ, ಸಮಯ, ಲೈವ್ ಸ್ಟ್ರೀಮ್ ಡಿಟೇಲ್ಸ್ ಇಲ್ಲಿದೆ..?

ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಹಿಳೆಯರ ಟೀಂ ಇಂಡಿಯಾ, ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನವನ್ನು ಎದುರಿಸಲಿದೆ. ನ್ಯೂಜಿಲೆಂಡ್ವಿರುದ್ಧ ಭಾರತ ತಂಡದ ವನಿತೆಯರು ಸೋಲನುಭವಿಸಿದ್ದರು. ನಂತರ ಶ್ರೀಲಂಕಾ ವಿರುದ್ಧ ಜಯ ಗಳಿಸಿತ್ತು. ಶುಕ್ರವಾರ ಕೀವಿಸ್ವಿರುದ್ಧ ಭಾರತ ಬೌಲಿಂಗ್ಹಾಗೂ ಬ್ಯಾಟಿಂಗ್ವೈಫಲ್ಯದಿಂದ 58 ರನ್ಗಳಿಂದ ಸೋಲೊಪ್ಪಿಕೊಂಡಿತು. ತಂಡವು ಈಗ ಕಳಪೆ ನೆಟ್ರನ್ರೇಟ್ಹೊಂದಿದ್ದು, 5 ತಂಡಗಳಿರುವಗುಂಪಿನಲ್ಲಿ ಕೊನೆ ಸ್ಥಾನದಲ್ಲಿದೆ.

ಪಾಕ್ವಿರುದ್ಧ ಪಂದ್ಯ ಸೇರಿ ಇನ್ನೂ ಒಟ್ಟು 3 ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಎಲ್ಲಾ ಪಂದ್ಯಗಳಲ್ಲೂ ಗೆಲ್ಲುವ ಅಗತ್ಯ ಇದೆ. ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಕದನವಾಗಿದೆ. ಒಂದು ವೇಳೆ ಪಾಕ್ವಿರುದ್ಧ ಸೋತರೆ ಭಾರತ ಸೆಮಿಫೈನಲ್ನಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಭಾರತ-ಪಾಕಿಸ್ತಾನ ನಡುವೆ ಮಹಿಳಾ ಟಿ20 ವಿಶ್ವಕಪ್ನಲ್ಲಿ ಇದು 8 ನೇ ಪಂದ್ಯ. ಹಿಂದಿನ 7 ಪಂದ್ಯಗಳಲ್ಲಿ ಭಾರತ 5 ರಲ್ಲಿ ಜಯ ಸಾಧಿಸಿದ್ದು, 2ರಲ್ಲಿ ಸೋಲನುಭವಿಸಿದೆ. ಇಂದು ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ.

ಟೀಂ ಇಂಡಿಯಾ ಆಟಗಾರರು: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಮನ್ಪ್ರೀತ್ ಕೌರ್ (ಕ್ಯಾಪ್ಟನ್), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೇಟ್ಕೀಪರ್), ಪೂಜಾ ವಸ್ತ್ರಾಕರ್, ದೀಪ್ತಿ ಶರ್ಮಾ, ಅರುಂಧತಿ ರೆಡ್ಡಿ, ಶ್ರೇಯಾಂಕ ಪಾಟೀಲ್, ಆಶಾ ಸೋಭಾನಾ, ರೇಣುಕಾ ಸಿಂಗ್‌.

ಪಾಕ್ ಆಟಗಾರರು: ಮುನೀಬಾ ಅಲಿ (ವಿಕೇಟ್ ಕೀಪರ್), ಗುಲ್ ಫಿರೋಜಾ, ಸಿದ್ರಾ ಅಮೀನ್, ಒಮೈಮಾ ಸೊಹೈಲ್, ನಿದಾ ದಾರ್, ತುಬಾ ಹಸನ್, ಫಾತಿಮಾ ಸನಾ (ಕ್ಯಾಪ್ಟನ್), ಅಲಿಯಾ ರಿಯಾಜ್, ಡಯಾನಾ ಬೇಗ್, ನಶ್ರಾ ಸಂಧು, ಸಾದಿಯಾ ಇಕ್ಬಾಲ್.‌

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow